ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ,
ಪ್ರಾಣದಾಸೆ ಮತ್ತೇಕಯ್ಯಾ ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ ನಿಮ್ಮ
ಅಂಕೆಗೆ ಝಂಕೆಗೆ ಶಂಕಿತನಾದಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.