ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ
ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ,
ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.