ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ

ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ.||1||

ಮನದ ಭಂಗವ ಅರುಹಿನ ಮುಖದಿಂದ ಗೆಲಿದೆ.||2||

ಜೀವದ ಭಂಗವ ಶಿವಾನುಭಾವದಿಂದ ಗೆಲಿದೆ.||3||

ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ.||4||

ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಂಗೆ ತೋರುವ
ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯಾ ?||5||

ಚೆನ್ನಮಲ್ಲಿಕಾರ್ಜುನ,
ಕಾಮನಕೊಂದು ಮನಸಿಜನಾಗುಳುಹಿದಡೆ||6||

ಮನಸಿಜನ ತಲೆಯ ಬರಹವ ತೊಡೆದೆನು.||7||

Leave a Comment

Your email address will not be published. Required fields are marked *