ಅಮ್ಮ ಅಮ್ಮಾ ಎಂದು ಕರೆಯುತಿಹೆನಮ್ಮಾ

ಶಿವರಂಜಿನಿ – ಝಪತಾಲ |

ಅಮ್ಮ ಅಮ್ಮಾ ಎಂದು ಕರೆಯುತಿಹೆನಮ್ಮಾ

ಕರಕರೆಯಿದೆಂದೆನದೆ ಓಡಿ ಬಾರಮ್ಮಾ||

ಯಾರ ದೋಷಗಳೆಷ್ಟು ನನಗೇಕೆ ಬೇಕು।

ನನ್ನ ದೋಷವ ತಿದ್ದಿ ನೀ ಸಲಹಬೇಕು||

ಪಾಪಿಗಳನುದ್ಧರಿಪ ನೀ ದಯಾಸಿಂಧು|

ನೀಡೆನಗೆ ಕರುಣೆಯಿಂ ಆ ಕೃಪೆಯ ಬಿಂದು||

ತಾಯಿ ನೀನಿರುತಿರಲು ತಬ್ಬಲಿಯೆ ನಾನು| ವಾತ್ಸಲ್ಯಸುಧೆಯುಣಿಸಲಾರೆಯಾ ನೀನು||

ಜ್ಞಾನ ಭಕ್ತಿ ವಿವೇಕ ವೈರಾಗ್ಯ ನೀಡು|

ಎನ್ನ ಹೃನ್ಮಂದಿರದಿ ನಿತ್ಯ ನಲಿದಾಡು||

– ಸ್ವಾಮಿ ಪುರುಷೋತ್ತಮಾನಂದ

Leave a Comment

Your email address will not be published. Required fields are marked *