ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,
ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ
ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ
ಅಂತರಂಗದಲ್ಲಿ ಕಾಣಬಹುದೆ ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ,
ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ
ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ
ಹೊಲಬಿನ ಹರಿಬ ತೋರಿ, ಮತ್ರ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ
ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು.
ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ
ಉಳುಹಿದನಾಗಿಇನ್ನು ಮತ್ರ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.

Leave a Comment

Your email address will not be published. Required fields are marked *