ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆಅರಿಯದಿದ್ದರೆ ನರಕವೇ ಪ್ರಾಪ್ತಿ
ದುರ್ಜನರ ಮನೆಯ ಪಾಯಸಾನ್ನಕಿಂತಸಜ್ಜನರ ಮನೆಯ ರಬ್ಬಳಿಗೆ ಲೇಸುಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ – ಬಲುದುರ್ಜನರ ಸಂಗ ಬಲು ಭಂಗ ಹರಿಯೆ ||1||
ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸುಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನುಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ ||2||
ಆಶೆಕಾರರ ಮನೆಯ ವಿಲಾಸ ಸುಖಕಿಂತಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸುಭೂಸುರಪ್ರಿಯ ಕಾಗಿನೆಲೆಯಾದಿಕೇಶವನಮೀಸಲಿನ ಪಾದಭಜನೆ ಕಡುಲೇಸು ಮನವೆ ||3||