ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ
ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು

ದೇವರಿಲ್ಲದ ಗುಡಿಯು ಪಾಳು ಬಿದ್ದಂಗಡಿಯುಭಾವವಿಲ್ಲದ ಭಕುತಿ ಅದು ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು||1||

ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು ||2||

ಮಕ್ಕಳಿಲ್ಲದ ಸಿರಿಯು ಕೊಳೆತ ತೆಂಗಿನ ತುರಿಯುಸೌಖ್ಯವಿಲ್ಲದ ಊಟ ಅದು ಕಾಳಕೂಟಒಕ್ಕಲಿಲ್ಲದ ಊರು ಕೊಳೆತು ನಾರುವ ನೀರುಸೊಕ್ಕಿ ನಡೆಯುವ ಭೃತ್ಯ ಅವ ಕ್ರೂರ ಕೃತ್ಯ ||3||

ಕಂಡು ಕರೆಯದ ನೆಂಟ ಮೊನೆಯು ಕೆಟ್ಟಿಹ ಕಂಟಉಂಡು ನಗದಿಹ ಮೋರೆ ಅದು ಕಹಿಯ ಸೋರೆದಂಡಿಗಂಜುವ ಬಂಟಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ|| 4||

ಬಿಟ್ಟು ನಡೆಯುವ ಗೆಣೆಯು ಹರಕು ತೊಗಲಿನ ಮಿಣಿಯುಕೊಟ್ಟು ಪೇಳುವ ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು ||5||

Leave a Comment

Your email address will not be published. Required fields are marked *