ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ
ತಾನು ತನ್ನವರೆಂಬ ಮಾನವರ ಸಲಹಿದ
ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ ||1||
ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ||2||
ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ ||3||