ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ,
ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ ;
ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ,
ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ, ಹೂಣಿ ಹೊಕ್ಕು ಬದುಕು ಕಂಡಾ,ಮನವೆ.