ಆರಿಗಾರಿಲ್ಲ ಆಪತ್ಕಾಲದೊಳಗೆ
ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ
ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ||1||
ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ|| 2||
ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ ||3||