ಆರು ಬದುಕಿದರಯ್ಯ ಹರಿ ನಿನ್ನ ನಂಬಿ
ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ
ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ||1||
ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ||2||
ತಿರಿದುಂಬ ದಾಸರ ಕೈ ಕಪ್ಪ ಕೊಂಬ ಮರ್ಮತಿರುಮಲಾಚಾರ್ಯ ಶ್ರೀಗುರುವೆ ಬಲ್ಲವರ ಕಾಗಿನೆಲೆಯಾದಿಕೇಶವನ ಭಜಿಸಿದರೆತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ||3||