ಆರು ಬಲ್ಲರು ಹರಿಹರಾದಿಗಳ ಮಹಿಮೆಯನು
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ
ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿನಾರಾಯಣಾಸ್ತ್ರವನು ಪಡೆದನೀತಗೌರೀ ಮನೋಹರನ ಘನತರಾರ್ಚನೆಗೈದುಚಾರುತರ ಚಕ್ರವನು ಪಡೆದನಾ ಶೌರಿ ||1||
ಬಲಿಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-ಗಿಲ ಕಾಯ್ದನಚ್ಯುತನು ಅನುಗಾಲದಿಬಲು ಭುಜನು ಬಾಣಾಸುರನ ಗೃಹ ದ್ವಾರವನುಬಳಸಿ ಕಾಯ್ದನು ಹರನು ವರವ ತಾನಿತ್ತು ||2||
ಭೋಗಿಶಯನನು ಆಗಿ ಭೋಗಿಭೂಷಣನಾಗಿವಾಗೀಶನಾಗಿ ಸೃಷ್ಟಿಸ್ಥಿತಿಲಯಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆಕಾಗಿನೆಲೆಯಾದಿಕೇಶವನ ಮಹಿಮೆಯನು|| 3||