ಆರು ಹಿತವರು ಎಂದು ನಂಬಬೇಡ
ಆರಿಗಾರಿಲ್ಲ ಆಪತ್ತು ಬಂದೊದಗಿದಡೆ
ಜನಕ ಹಿತದವನೆಂದು ನಂಬಬಹುದೇ ಹಿಂದೆತನಯ ಪ್ರಹ್ಲಾದನಿಗೆ ಪಿತ ಮುನಿದನುಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||1||
ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನನಿಗಳ ಬಂಧನದಿಂದ ಬಂಧಿಸಿದನುಜಗವರಿಯೆ ಸೋದರನು ಮಮತೆಯುಳ್ಳವನೆನಲೆಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ||2||
ತನಗೆ ದೇಹಾನುಬಂಧಿಗಳೆ ಬಂಧುಗಳೆಂದುಮನದಿ ನಿಚ್ಚಳವಾಗಿ ನಂಬಬೇಡಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನಅನುದಿನದಿ ನಂಬಿದವಗಿಹಪರದಿ ಸುಖವು|| 3||