ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ

ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ
ಎನ ಮಾಡಿದಡೂ ಆನಂಜುವಳಲ್ಲ.
ತರಗೆಲೆಯ ಮೆಲಿದು ಆನಿಹೆನು,
ಸರಿಯ ಮೇಲೊರಗಿ ಆನಿಹೆನು.
ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ
ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.

Leave a Comment

Your email address will not be published. Required fields are marked *