ಆವುದೊಳ್ಳೆಯದೊ ನಿನ್ನಂಗ – ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ
ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ ||1||
ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ||2||
ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ ||3||
ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ ||4||
ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ ||5||