ಆವ ಬಲವಿದ್ದರೇನು ವಾಸು

ಆವ ಬಲವಿದ್ದರೇನು – ವಾಸುದೇವನಾ ಬಲವು ನಿಜವಾಗಿ ಇರದನಕ

ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ|| 1||

ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ||2||

ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ ||3||

ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ|| 4||

ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ ||5||

Leave a Comment

Your email address will not be published. Required fields are marked *