ಆವ ಸಿರಿಯಲಿ ನೀನು ಎನ್ನ ಮರೆತೆ

ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ

ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ||1||

ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ||2||

ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ||3||

ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ ನಿನ್ನ ಬಂಟನಾದನೆಂಬ ಸಿರಿಯೆಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆಅನುಮಾನ ಮಾಡದೆ ಪೇಳೊ ನರಹರಿಯೆ ||4||

ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿಪಂಥವೇ ನಿನಗಿಚಿದು ಆವ ನಡತೆಕಂತುಪಿತ ಕಾಗಿನೆಲೆಯಾದಿಕೇಶವ ರಂಗಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ||5||

Leave a Comment

Your email address will not be published. Required fields are marked *