ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ
ಮುಂದಕೆ ನಿಮ್ಮ ಮನೆಗೆ ಬಾರನಮ್ಮ
ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನುಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ ಮಕ್ಕಳಂತೆ ||1||
ಹಸುಮಗುವನು ಕಂಡು ಮುದ್ದಿಸಲೊಲ್ಲದೆಹುಸಿಗ ಕಳ್ಳನೆಂದು ಕಟ್ಟುವಿರಿವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮಹಸು ಮಗುವಿನಂತೆ ಭಾವಿಸಬಾರದೆ ||2||
ಎಷ್ಟು ಸಾರಿಯು ನಾ ಬೇಡವೆಂದರೆ ಕೇಳದುಷ್ಟ ಮಕ್ಕಳ ಕೂಡೆ ಒಡನಾಟವಕಟ್ಟಿದ ನೆಲುವಿನ ಬೆಣ್ಣೆಯನೀವೆನುಬಿಟ್ಟು ಕಳುಹಿರಮ್ಮ ಆದಿಕೇಶವನ ||3||