ಇರಬಂದುದಿಲ್ಲ ಸಂಸಾರ

ಇರಬಂದುದಿಲ್ಲ ಸಂಸಾರ – ಇದನರಿತುಸಿರಿಹರಿಯ ಭಜಿಸುವುದು ಸಾರ

ಧರೆಯನಾಳಿದ ತ್ರಿಶಂಕು ದೊರೆಯು ತಾನೆಲ್ಲಿಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳೆಲ್ಲಿಶರಧಿ ಮಧ್ಯದೊಳಿದ್ದ ರಾವಣಾಸುರನೆಲ್ಲಿಸಿರಿಯುಳ್ಳ ಕೌರವರು ಪಾಂಡವರು ತಾವೆಲ್ಲಿಧರೆಗಿಳಿದು ಪೋದಾತ ವಾಲಿಯು ತಾನೆಲ್ಲಿಸುರರೊಡನೆ ಹೋರಿದಾ ಬಲಿಯು ತಾನೆಲ್ಲಿ ||1||

ದಶರಥ ಮೊದಲು ಷೋಡಶ ರಾಯರುಗಳೆಲ್ಲಿಅಸಹಾಯ ಶೂರ ವೀರ ವಿಕ್ರಮರೆಲ್ಲಿಅಸಮಬಲ ವಸುಮತಿಯ ಹಿರಣ್ಯಾಕ್ಷನೆಲ್ಲಿವಸುಧೆಯೊಳಗಿದ್ದ ಹದಿನಾರು ಸಾವಿರರೆಲ್ಲಿಕುಸುಮ ಬಾಣನ ಪಡೆದ ದೇವ ತಾನೆಲ್ಲಿಸುಶರೀರ ಎನಿಸಿದ ಅಭಿಮನ್ಯು ತಾನೆಲ್ಲಿ ||2||

ಈ ಪರಿಯೆ ಈ ಧರೆಯನಾಳಿ ಹೋದವರೆಷ್ಟುಈ ಪರಿಯೆ ಸ್ವರ್ಗಕ್ಕೆ ಇಂದ್ರಾದಿಗಳು ಎಷ್ಟುಈ ಪರಿಯೆ ಹರಬ್ರಹ್ಮರಾದವರು ತಾವೆಷ್ಟುಈ ಪರಿಯೆ ಯುಗಪ್ರಳಯವಾಗಿ ಹೋದವು ಎಷ್ಟುಈ ಪರಿಯೆ ಜಲ ಪ್ರಳಯವಾಗಿ ಹೋದವು ಎಷ್ಟುಶ್ರೀಪತಿ ಕೇಶವನಲಿಡು ಭಕುತಿ – ಕೊಡುವ ಮುಕುತಿ ||3||

Leave a Comment

Your email address will not be published. Required fields are marked *