ಇಷ್ಟು ದಿನ ಈ ವೈಕುಂಠ

ಇಷ್ಟು ದಿನ ಈ ವೈಕುಂಠಎಷ್ಟು ದೂರವೊ ಎನ್ನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೆ ಶ್ರೀರಂಗಶಾಯಿ

ಎಂಟು ಏಳನು ಕಳೆದುದರಿಂದತುಂಟರೈವರ ತುಳಿದುದರಿಂದಕಂಟಕನೊಬ್ಬನು ಅಳಿದುದರಿಂದಭಂಟನಾಗಿ ಬಂದೇ ಶ್ರೀರಂಗಶಾಯಿ||1||

ವನ ಉಪವನಗಳಿಂದಘನ ಸರೋವರಗಳಿಂದಕನಕ ಗೋಪುರಗಳಿಂದಘನಶೋಭಿತನೆ ಶ್ರೀರಂಗಶಾಯಿ||2||

ವಜ್ರವೈಢೂರ್ಯ ತೊಲೆಗಳ ಕಂಡೆಪ್ರಜ್ವಲಿಪ ಮಹಾದ್ವಾರವ ಕಂಡೆನಿರ್ಜರಾದಿ ಮುನಿಗಳ ಕಂಡೆದುರ್ಜನಾಂತಕ ಶ್ರೀರಂಗಶಾಯಿ|| 3||

ರಂಭೆ ಊರ್ವಶಿ ಮೇಳವ ಕಂಡೆತುಂಬುರು ನಾರದರ ಕಂಡೆಅಂಬುಜೋದ್ಭವ ಪ್ರಮುಖರ ಕಂಡೆಶಂಬರಾರಿ ಪಿತನೆ ಶ್ರೀರಂಗಶಾಯಿ||4||

ನಾಗಶಯನನ ಮೂರುತಿ ಕಂಡೆಭೋಗಿ ಭೂಷಣ ಶಿವನನು ಕಂಡೆಭಾಗವತರ ಸಮ್ಮೇಳವ ಕಂಡೆಕಾಗಿನೆಲೆಯಾದಿಕೇಶವ ಶ್ರೀರಂಗಶಾಯಿ ||5||

Leave a Comment

Your email address will not be published. Required fields are marked *