ಈತನೀಗ ವಾಸುದೇವನು

ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು
ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ

ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ – ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ||1||

ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ ||2||

ಸೃಷ್ಟಿಕರ್ತಗೆ ಮಗನಾದವನಿಗಿಷ್ಟ ಭೂಷಣ ಅಶನವಾದನನಿಷ್ಠ ಪುತ್ರಗೆ ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕಷ್ಟ ಮಹಿಮನಾದ ದೇವ ಕಾಣಿರೊ ||3||

ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ||4||

ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ ||5||

Leave a Comment

Your email address will not be published. Required fields are marked *