ಉಳ್ಳುದೊಂದು ತನು, ಉಳ್ಳುದೊಂದು ಮನ.
ನಾನಿನ್ನಾವ ಮನದಲ್ಲಿ ಧ್ಯಾನವ ಮಾಡುವೆನಯ್ಯಾ ?
ಸಂಸಾರವನಾವ ಮನದಲ್ಲಿ ತಲ್ಲೀಯವಾಹೆನಯ್ಯಾ ?
ಅಕಟಕಟಾ, ಕೆಟ್ಟೆ ಕೆಟ್ಟೆ ? ಸಂಸಾರಕ್ಕಲ್ಲಾ, ಪರಮಾರ್ಥಕ್ಕಲ್ಲಾ ?
ಎರಡಕ್ಕೆ ಬಿಟ್ಟ ಕರುವಿನಂತೆ ?
ಬಿಲ್ವ ಬೆಳವಲಕಾಯನೊಂದಾಗಿ ಹಿಡಿಯಬಹುದೆ ಚೆನ್ನಮಲ್ಲಿಕಾರ್ಜುನಾ ?