ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ 

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ
ಮುಂದರಿತು ಶ್ರೀಹರಿಯ ಭಜಿಸುವುದು ಲೇಸು

ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ ||1||

ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ||2||

ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ ||3||

Leave a Comment

Your email address will not be published. Required fields are marked *