ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ,
ನಿನಗೆ ಇಂಬು ಮಾಡಿಕೊಂಡಿರ್ದೆನಲ್ಲಾ ಎಲೆಯಯ್ಯಾ.
ಎನ್ನ ಲಂಬಿಸುವ ಲಾವಣ್ಯದ ರೂಪುರೇಖೆಗಳ
ನಿನ್ನ ಕಣ್ಣಿಂಗೆ ಕೈವಿಡಿದಂತೆ ಮಾಡಿರ್ದೆನಲ್ಲಯ್ಯ.
ನಿನ್ನ ಮುಂದಿರಟ್ಟಲನ್ಯರು ಕೊಂಡೊಯಿವಾಗಲೆಂತು
ಸೈರಿಸಿದೆ ಹೇಳಾ ಚೆನ್ನಮಲ್ಲಿಕಾರ್ಜುನಾ ?
ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ,
ನಿನಗೆ ಇಂಬು ಮಾಡಿಕೊಂಡಿರ್ದೆನಲ್ಲಾ ಎಲೆಯಯ್ಯಾ.
ಎನ್ನ ಲಂಬಿಸುವ ಲಾವಣ್ಯದ ರೂಪುರೇಖೆಗಳ
ನಿನ್ನ ಕಣ್ಣಿಂಗೆ ಕೈವಿಡಿದಂತೆ ಮಾಡಿರ್ದೆನಲ್ಲಯ್ಯ.
ನಿನ್ನ ಮುಂದಿರಟ್ಟಲನ್ಯರು ಕೊಂಡೊಯಿವಾಗಲೆಂತು
ಸೈರಿಸಿದೆ ಹೇಳಾ ಚೆನ್ನಮಲ್ಲಿಕಾರ್ಜುನಾ ?