ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ.
ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ.
ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.
ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ.
ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ.
ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.