ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ

ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ||1||

ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||2||

ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||3||

ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ|| 4||

ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||5||

ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||6||

ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||7||

ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||8||

ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ|| 9||

ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||10||

ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ ||11||

6 thoughts on “ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ”

Leave a Comment

Your email address will not be published. Required fields are marked *