ಎಲ್ಲಿ ಹೋದಡೆ ಕಲಿಗೆ ಭಯವಿಲ್ಲ,

ಎಲ್ಲಿ ಹೋದಡೆ ಕಲಿಗೆ ಭಯವಿಲ್ಲ,
ಹಂದೆಗೆ ಸುಖವಿಲ್ಲ ಕಾಣಿರಣ್ಣಾ.
ಈವಂಗವಗುಣವಿಲ್ಲ, ಕರುಣವುಳ್ಳವಂಗೆ ಪಾಪವಿಲ್ಲ.
ನಿಮ್ಮ ಮುಟ್ಟಿ ಪರಧನ ಪರಸ್ತ್ರೀಯ ತೊರೆದಾತಂಗೆ ಮುಂದೆ ಭವವಿಲ್ಲ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *