ಏನು ಮಾಡಲಯ್ಯ

ಏನು ಮಾಡಲಯ್ಯ ಬಯಲಾಸೆ ಬಿಡದು
ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ

ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ ||1||

ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ ||2||

ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ ||3||

ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ ||4||

ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ|| 5||

Leave a Comment

Your email address will not be published. Required fields are marked *