ಏನೆಂದು ಕೊಂಡಾಡಿ ಸ್ತುತಿಸಲೋ

ಏನೆಂದು ಕೊಂಡಾಡಿ ಸ್ತುತಿಸಲೋ ದೇವನಾನೇನು ಬಲ್ಲೆ ನಿನ್ನ ಮಹಿಮೆಗಳ ಮಾಧವ

ಹರಿಮುಕುಂದನು ನೀನು ನರಜನ್ಮ ಹುಳು ನಾನುಪರಮಾತ್ಮನು ನೀನು ಪಾಮರನು ನಾನುಗರುಡ ಗಮನನು ನೀನು ಮರುಳು ಪಾಪಿಯು ನಾನುಪರಂಜ್ಯೋತಿಯು ನೀನು ದುರುಳ ತಿರುಕನು ನಾನು|| 1||

ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು||2||

ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು ||3||

ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು||4||

ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು ||5||

Leave a Comment

Your email address will not be published. Required fields are marked *