ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು
ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ ||1||
ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ ||2||
ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು ||3||