ಐದು ಪರಿಯ ಬಣ್ಣವ ತಂದು ಕೊಟ್ಟಡೆ

ಐದು ಪರಿಯ ಬಣ್ಣವ ತಂದು ಕೊಟ್ಟಡೆ
ನಾಲ್ಕು ಮೊಲೆಯ ಹಸುವಾಯಿತ್ತು.
ಹಸುವಿನ ಬಸಿರಲ್ಲಿ ಕರುವು ಹುಟ್ಟಿತ್ತು.
ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡಡೆ
ಕರ ರುಚಿಯಾಯಿತ್ತು.
ಮಧುರ ತಲೆಗೇರಿ ಅರ್ಥವ ನೀಗಾಡಿ
ಆ ಕರುವಿನ ಬೆಂಬಳಿವಿಡಿದು ಭವಹರಿಯಿತ್ತು ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *