ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ
ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ
ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ ||1||
ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2||
ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3||
ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4||
ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5||
ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ ||6||
ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮಸುಲಭ ಪದವಿದು ನಳಿನಜಾಂಡದೊಳು ಚಂದಮಾಮ|| 7||
ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ ||8||
ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ ||9||