ಓಹೊ ಎನ ಜೀವ ಮೈಯೆಲ್ಲ ನವಗಾಯ
ಗಾಯ ಕಟ್ಟುವರಿಲ್ಲ ಗಾಳಿ ಹಾಕುವರಿಲ್ಲ
ಮಾಡಿಲ್ಲ ಮಳೆಯಿಲ್ಲ ಮರದ ಮ್ಯಾಲೆ ನೀರ ಕಂಡೆಕಾಡು ಸುಡುವುದ ಕಂಡೆ ಬೂದಿಯ ಕಾಣಲಿಲ್ಲ ||1||
ಬಿತ್ತಲಿಲ್ಲ ಬೆಳೆಯಲಿಲ್ಲ ನೆಟ್ಟು ನೀರ ತೋರಲಿಲ್ಲಹೊತ್ತುಕೊಂಡು ತಿರುಗಿದೆ ರೊಕ್ಕದಾ ಪ್ರಾಣಿಯನ್ನು ||2||
ಅಡಿಕೆಯಷ್ಟು ಆಕಳಣ್ಣ ಹಿಡಿಕೆಯಷ್ಟು ಕೆಚ್ಚಲಣ್ಣಒಡನೆ ಕರೆದಾರ ಕರಿತೈತಿ ರಂಜಣಿಗಿ ಹಾಲಣ್ಣ ||3||
ಮೂರು ಮೊಳದಾ ಬಳ್ಳಿಗೆ ಆರು ಮೊಳದ ಕಾಯಣ್ಣಆರು ಹತ್ತರ ಮೊಳದ, ಕಾಯಿ ಕೊಯ್ಯುವ ಕುಡುಗೋಲಣ್ಣ||4||
ಊರ ಮುಂದೆ ಹಿರಣ್ಯಕನ ಕೊರಳ ಕೊಯ್ವುದ ಕಂಡೆಕೊರಳ ಕೊಯ್ವುದ ಕಂಡೆ ರಕುತವ ಕಾಣಲಿಲ್ಲ ||5||
ಕಾಗಿನೆಲೆಯ ಕನಕದಾಸ ಹೇಳಿದಂಥ ಮುಂಡಿಗೆಯಮಿಗೆ ಒಳ ಹೊರಗೆಲ್ಲ ಬಲ್ಲ ಬಾಡದಾದಿ ಕೇಶವರಾಯ ||6||