ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ – ರಿಪುಗಂಡ ಉದ್ದಂಡ ನರಸಿಂಹನ ಕಂಡೆನಯ್ಯ
ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ||1||
ಉರದೊಳಪ್ಪಳಿಸಿ ಅರಿ ಬಸಿರ ಸರಸರನೆ ಸೀಳಿಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರನರವನು ತೆಗೆದು ನಿರ್ಗಳಿತ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ||2||
ಪುರಜನರು ಹಾಯೆನಲು ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ||3||