ಕಣ್ಗೆ ಶೃಂಗಾರ ಗುರುಹಿರಿಯರ ನೋಡುವುದು.
ಕರ್ಣಕ್ಕೆ ಶೃಂಗಾರ ಪುರಾತನರ ಸುಗೀತಂಗಳ ಕೇಳುವುದು.
ವಚನಕ್ಕೆ ಶೃಂಗಾರ ಸತ್ಯವ ನುಡಿವುದು.
ಸಂಭಾಷಣೆಗೆ ಶೃಂಗಾರ ಸದ್ಭಕ್ತರ ನುಡಿಗಡಣ.
ಕರಕ್ಕೆ ಶೃಂಗಾರ ಸತ್ಪಾತ್ರಕ್ಕೀವುದು.
ಜೀವಿಸುವ ಜೀವನಕ್ಕೆ ಶೃಂಗಾರ ಗಣಮೇಳಾಪ
ಇವಿಲ್ಲದ ಜೀವಿಯ ಬಾಳುವೆ ಏತಕ್ಕೆ ಬಾತೆಯಯ್ಯಾ ಚೆನ್ನಮಲ್ಲಿಕಾರ್ಜುನಾ