ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ
ಬಲು ಘೋರ ಪಾತಕದಿ ಇಳೆಯು ತಲ್ಲಣಗೊಂಡುಕಳವಳಿಸುತಿದೆ ಕಾಲ ವಿಪರೀತದಿ
ಅತ್ತೆಯ ಸೊಸೆ ಬಯ್ವಳು – ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ – ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ ||1||
ನಿತ್ಯ ನೇಮವು ನಿಂತಿತು – ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು ||2||
ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ ಕ್ರೋಧಗಳುಅನ್ಯಾಯದಿಂದ ಅರ್ಥವ ಗಳಿಸುವರುತನ್ನ ಕಾಂತನ ಬಿಟ್ಟು ಸ್ತ್ರೀಯರುಅನ್ಯರಿಗೆ ಮನವೆರಗಿ ಮೋಹಿಪರುಬಣ್ಣಗೆಟ್ಟಿತು ವರ್ಣ ತಪ್ಪಿತು ಪ್ರ-ಸನ್ನ ಶ್ರೀ ನೆಲೆಯಾದಿಕೇಶವನೆ ||3||