ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ
ಆನು ಬಲ್ಲೆನೆಂಬ ನುಡಿ ಸಲ್ಲದು.
ಲಿಂಗದಲ್ಲಿ ಮರೆದು ಮಚ್ಚಿರ್ದ ಮನವು
ಹೊರಗೆ ಬೀಸರವೋಗದೆ ?
ಉರೆ ತಾಗಿದ ಕೋಲು ಗರಿ ತೋರುವುದೆ ?
ಮೊರೆದು ಬೀಸುವ ಗಾಳಿ ಪರಿಮಳವನುಂಡಂತೆ ಬೆರಸಬೇಕು ಚೆನ್ನಮಲ್ಲಿಕಾರ್ಜುನಯ್ಯನ.
ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ
ಆನು ಬಲ್ಲೆನೆಂಬ ನುಡಿ ಸಲ್ಲದು.
ಲಿಂಗದಲ್ಲಿ ಮರೆದು ಮಚ್ಚಿರ್ದ ಮನವು
ಹೊರಗೆ ಬೀಸರವೋಗದೆ ?
ಉರೆ ತಾಗಿದ ಕೋಲು ಗರಿ ತೋರುವುದೆ ?
ಮೊರೆದು ಬೀಸುವ ಗಾಳಿ ಪರಿಮಳವನುಂಡಂತೆ ಬೆರಸಬೇಕು ಚೆನ್ನಮಲ್ಲಿಕಾರ್ಜುನಯ್ಯನ.