ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ

ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲಭ್ರಷ್ಟ ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ

ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲಪರಿಪರಿಯಲಿ ವಿದ್ಯೆಯ ಕಲಿತರಿಲ್ಲನರಿಯ ಬುದ್ಧಿಯಿಂದಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರು ಇಲ್ಲ ||1||

ಕೊಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲಕಂಡ ಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನು ಕೊರಳಿಗಿಟ್ಟರು ಇಲ್ಲ – ಪ್ರ-ಚಂಡನಾದರು ಇಲ್ಲ, ಪರಿಹಾಸ್ಯವೆಲ್ಲ ||2||

ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲಬೆಟ್ಟವನು ಕಿತ್ತು ತಂದಿಟ್ಟರಿಲ್ಲಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯಕೊಟ್ಟವರಿಗುಂಟು ಕೊಡದವರಿಗಿಲ್ಲ||3||

Leave a Comment

Your email address will not be published. Required fields are marked *