ಕಷ್ಟ ತನುವಿನಲಿ ಹುಟ್ಟಿ

ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ
ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ

ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ||1||

ಅತಿವೇಧೆಯಲಿ ಸತಿಸುತರೆಂಬ ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ ||2||

ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ ||3||

ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ ||4||

ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ|| 5||

Leave a Comment

Your email address will not be published. Required fields are marked *