ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು,
ಸೋಮ ಸೂರ್ಯರ ಹುರಿದು ಹುಡಿಮಾಡಿ ತಿಂಬವಳಿಂಗೆ
ನಾಮವನಿಡಬಲ್ಲವರಾರು ಹೇಳಿರೆ ?
ನೀ ಮದವಳಿಗನಾಗೆ ನಾ ಮದವಳಿಗಿತ್ತಿಯಾಗೆ
ಯಮನ ಕೂಡುವ ಮರುತನಂತೆ ನೋಡಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.
ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು,
ಸೋಮ ಸೂರ್ಯರ ಹುರಿದು ಹುಡಿಮಾಡಿ ತಿಂಬವಳಿಂಗೆ
ನಾಮವನಿಡಬಲ್ಲವರಾರು ಹೇಳಿರೆ ?
ನೀ ಮದವಳಿಗನಾಗೆ ನಾ ಮದವಳಿಗಿತ್ತಿಯಾಗೆ
ಯಮನ ಕೂಡುವ ಮರುತನಂತೆ ನೋಡಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.