ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯನೇನಾದರೂ ಬಲ್ಲಿರ

ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲಅಟ್ಟು ಉಣ್ಣದ ವಸ್ತುಗಳಿಲ್ಲಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನುನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ ||1||

ಜಲವೆ ಸಕಲ ಕುಲಕ್ಕೆ ತಾಯಲ್ಲವೆಜಲದ ಕುಲವನೇನಾದರೂ ಬಲ್ಲಿರಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹನೆಲೆಯನರಿತು ನೀ ನೆನೆ ಕಂಡ್ಯ ಮನುಜ ||2||

ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರಹರಿಮಯವೆಲ್ಲವೆನುತ ತಿಳಿದುಸಿರಿ ಕಾಗಿನೆಲೆಯಾದಿಕೇಶವರಾಯನಚರಣ ಕಮಲವ ಕೀರ್ತಿಸುವನೆ ಕುಲಜ ||3||

Leave a Comment

Your email address will not be published. Required fields are marked *