ಕುಲ ಕುಲ ಕುಲವೆನ್ನುತಿಹರು 

ಕುಲ ಕುಲ ಕುಲವೆನ್ನುತಿಹರು
ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ

ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ||1||

ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು ||2||

ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ ||3||

Leave a Comment

Your email address will not be published. Required fields are marked *