ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ,

ಕೆಚ್ಚಿಲ್ಲದ ಮರನ ಕ್ರಿಮಿ ಇಂಬುಗೊಂಬಂತೆ,
ಒಡೆಯನಿಲ್ಲದ ಮನೆಯ ಶುನಕ ಸಂಚುಗೊಂಬಂತೆ,
ನೃಪತಿಯಿಲ್ಲದ ದೇಶವ ಮನ್ನೆಯರಿಂಬುಗೊಂಬಂತೆ,
ನಿಮ್ಮ ನೆನಹಿಲ್ಲದ ಶರೀರವ
ಭೂತ ಪ್ರೇತ ಪಿಶಾಚಿಗಳಿಂಬುಗೊಂಬಂತೆ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *