ಕೈಯ ತೋರಿದ ಬಗೆಯ

ಕೈಯ ತೋರಿದ ಬಗೆಯ, ಅಮ್ಮಮ್ಮ ಯಾದವಗಿರಿ ಕಲ್ಯಾಣಿ ನೀನು

ಸಕಲ ಜನರು ಕಾಣುತಿರಲುವಿಕೃತಿ ವತ್ಸರ ಚೈತ್ರ ದ್ವಿತೀಯೇಕಾದಶಿಯೊಳುಪ್ರಕಟಿತಾ ಶುಕ್ರವಾರದೊಳು ತನ್ನಭಕುತರಿಗುತ್ಸಾಹ ಸಂಧ್ಯಕಾಲದೊಳು ||1||

ಕಡಗ ಕಂಕಣ ಗೀರುಗಂಧ ಮಿಗೆಕಡು ಚೆಲುವಿನ ಬಣ್ಣ ಕುಪ್ಪುಸದಿಂದನಡು ಬೆರಳುಂಗುರದಿಂದ ಕೈಯಬೆಡಗ ನೋಡಿದ ಜನರಿಗೆ ಪುಟ್ಟಿತಾನಂದ ||2||

ಜನರೆಲ್ಲ ಯದುಶೈಲೋತ್ಸವವ ಕೇಳಿಘನ ಕಾಲದೇಶದಜಿತ ಭಯವನಿಮಗೆ ಬಿನ್ನೈಪೆನು ನಯವ ಕೊಟ್ಟಮನೋಹರುಷದಿ ನಮಗಿತ್ತ ವೈಭವವ ||3||

ಚೆಲುವರಾಯನ ರಥೋತ್ಸವದೀ ತೀರ್ಥಕೊಲಿದು ಗಂಗಾದೇವಿ ಬರುವ ಸಂಭ್ರಮವನೆಲೆಯ ಸರ್ವರಿಗನುಭವವ ಕೋಟಿಮನೋಹರುಷವನ್ನು ನಮಗಿತ್ತ ವೈಭವವ ||4||

ನಿನ್ನ ಮೋಹದ ಕಂದ ನಾನೊ ಕೇಳೆನಿನ್ನೊಮ್ಮೆ ದಿವ್ಯ ಹಸ್ತಂಜವನೀವಚೆನ್ನಿಗ ವರದ ವೆಂಕಟಾದಿಕೇಶವನುತನ್ನ ನಂಬಿದ ಭಕ್ತರಾಶ್ರಿತ ಕಾಮಧೇನು ||5||

Leave a Comment

Your email address will not be published. Required fields are marked *