ಕೈಸಿರಿಯ ದಂಡವ ಕೊಳಬಹುದಲ್ಲದೆ,

ಕೈಸಿರಿಯ ದಂಡವ ಕೊಳಬಹುದಲ್ಲದೆ,
ಮೈಸಿರಿಯ ದಂಡವ ಕೊಳಲುಂಟೆ ?
ಉಟ್ಟಂತಹ ಉಡಿಗೆ ತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ,
ಮುಚ್ಚಿರ್ದ ಮುಸುಕಿರ್ದ ನಿರ್ವಾಣವ ಸೆಳೆದುಕೊಳಬಹುದೆ ?
ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡುಗೆ ತೊಡುಗೆಯ ಹಂಗೇಕೋ ಮರುಳೆ ?

Leave a Comment

Your email address will not be published. Required fields are marked *