ಕೊಳಲ ದನಿಗೆ ಸರ್ಪ ತಲೆದೂಗಿದಡೇನು,
ಒಳಗಣ ವಿಷದ ಬಯಕೆ ಬಿಡದನ್ನಕ್ಕ ?
ಹಾಡಿದಡೇನು, ಕೇಳಿದಡೇನು,
ತನ್ನಲುಳ್ಳ ಅವಗುಣ ಬಿಡದನ್ನಕ್ಕ ?
ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.
ಕೊಳಲ ದನಿಗೆ ಸರ್ಪ ತಲೆದೂಗಿದಡೇನು,
ಒಳಗಣ ವಿಷದ ಬಯಕೆ ಬಿಡದನ್ನಕ್ಕ ?
ಹಾಡಿದಡೇನು, ಕೇಳಿದಡೇನು,
ತನ್ನಲುಳ್ಳ ಅವಗುಣ ಬಿಡದನ್ನಕ್ಕ ?
ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.