ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ?

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ?
ಕೊಳಕ್ಕಲ್ಲದೆ ಕಿರುವಳ್ಳಕ್ಕೆಳಸುವುದೆ ಹಂಸೆ ?
ಮಾಮರ ತಳಿತಲ್ಲದೆ ಸರಗೈವುದೆ ಕೋಗಿಲೆ ?
ಪರಿಮಳವಿಲ್ಲದ ಪುಷ್ಪಕ್ಕೆಳಸುವುದೆ ಭ್ರಮರ ?
ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗಲ್ಲದೆ
ಅನ್ಯಕ್ಕೆಳಸುವುದೆ ಎನ್ನ ಮನ ? ಪೇಳಿರೆ, ಕೆಳದಿಯರಿರಾ ?

Leave a Comment

Your email address will not be published. Required fields are marked *