ಡೊಂಕು ಬಾಲದ ನಾಯಕರೆ

ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ

ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ||1||

ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ||2||

ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ ||3||

* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.

Leave a Comment

Your email address will not be published. Required fields are marked *