ದಾಸನಾಗೋ ಭವಪಾಶನೀಗೋ – ವಿಶೇಷನಾಗೋ
ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ – ಸಂತೋಷಿಯಾಗೊ
ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ – ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ – ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ – ಇದು ಚೆಲುವೇನೊವಾಸುದೇವನೆಂಬ ಒಳಗಿಹ ಹಂಸನ ಸೇರಿಲೇಸನುಂಡು ಮೋಸಗೊಳದೆ ಮುಕ್ತನಾಗೊ – ನೀ ಶಕ್ತನಾಗೊ||1||
ಅತ್ತಲೋ ಇತ್ತಲೋ – ಎತ್ತಲೋ ಈ ಸಂಸಾರಬತ್ತಲೆಗೆ ಬತ್ತಲೆ ನಿತ್ಯವಲ್ಲ – ಪರಿಮಿತಿ ಇಲ್ಲಕತ್ತಲೆ ಕಾವಳದೊಳು ಕಾಣಲಾರದೆ ನೀನುಸತ್ಯವೆಂಬ ದಾರಿಯನು ಸೇರಲಿಲ್ಲ – ಲೇಸು ತೋರಲಿಲ್ಲಉತ್ತಮ ಅ ಉ ಮ ಎಂಬ ಓಂಕಾರ ಬೀಜಾಕ್ಷರಚಿತ್ತದಲಿ ಗ್ರಹಿಸು ನೀ ಬಿಡಬೇಡ – ಬಿಟ್ಟು ಕೆಡಬೇಡಹೊತ್ತಾರೆಯಲೊ ಬೈಗಿನಲೊ ಆಗಲೊ ಈಗಲೊ ಕಾಯನಿತ್ಯವೆಂದು ಸ್ಥಿರವೆಂದು ನಂಬಬೇಡ – ನಿನಗೆ ಡಂಬ ಬೇಡ ||2||
ಆಯಿತೊ ಹೋಯಿತೊ ಏನಾಯಿತೊ ಈ ದೇಹಕ್ಕೆತಾಯಿ ಯಾರೊ ತಂದೆ ಯಾರೊ ಮಡದಿ ಯಾರೊ ಮಕ್ಕಳ್ಯಾರೊಮಾಯದೊಳು ಸಿಲುಕಿ ಬಲು ಕಾಲದಿಂದ ಶ್ರೀರಘುರಾಯನೆಂಬ ವಸ್ತುವಿನ ಸ್ಮರಣೆ ಬಿಟ್ಟು – ಭವದಿ ಮಮತೆ ಇಟ್ಟುನಾಯ ಬಾಯ ಅರಿವೆಯಂತೆ ನಾನಾ ಕೋಟಲೆಯಲಿ ಬಿದ್ದುಬಾಯಿ ಬಾಯಿ ಬಿಡುತಲಿ ಸಾವುದೇನೊ – ನೀ ನೋವುದೇನೊತ್ರಾಯಿ ತ್ರಾಯಿ ತ್ರಾಯಿಯೆಂದು ತ್ರೈಲೋಕ್ಯದೊಡೆಯ ಪುಣ್ಯದಾಯಕನ ಹೊಂದಿ ನೀ ಧನ್ಯನಾಗೊ – ಮುಕ್ತ ಮಾನ್ಯನಾಗೊ ||3||
ಅಂದಿಗೊ ಇಂದಿಗೊ ಒಮ್ಮೆ ಸಿರಿ ಕಮಲೇಶನನ್ನುಒಂದು ಬಾರಿ ಅರುಹಿಂದ ನೆನೆಯಲಿಲ್ಲ – ಮನ ತಣಿಯಲಿಲ್ಲಬಂದು ಬಂದು ಭ್ರಮೆಗೊಂಡು ಮಾಯಾಮೋಹಕೆ ಸಿಕ್ಕಿನೊಂದು ಬೆಂದು ಒಂದರಿಂದ ಉಳಿಯಲಿಲ್ಲ – ಬಂಧ ಕಳೆಯಲಿಲ್ಲಸಂದೇಹವ ಮಾಡದಿರು ಅರಿವು ಎಂಬ ದೀಪ ಹಿಡಿದುಇಂದು ಕಾಣು ದೇಹದಲಿ ಪಿಂಡಾಂಡ – ಹಾಗೆ ಬ್ರಹ್ಮಾಂಡಇಂದಿರಾ ರಮಣನ ಧ್ಯಾನವನ್ನು ಮಾಡಿ ವಿವೇಕದಿ ಮುಕುಂದನಿಂದ ಮುಕುತಿಯ ಬೇಡು ಕಂಡ್ಯ – ನೀ ನೋಡು ಕಂಡ್ಯ ||4||
ನೂರು ಬಾರಿ ಶರಣು ಮಾಡಿ ನೀರ ಮುಳುಗಲ್ಯಾಕೆ ಪರನಾರಿಯರ ನೋಟಕೆ ಗುರಿಯ ಮಾಡಿದೆ – ಮನ ಸೆರೆಯ ಮಾಡಿದೆಸೋರೆಯೊಳು ಸುರೆ ತುಂಬಿ ಮೇಲೆ ಹುವ್ವಿನ ಹಾರ ಹಾಕಿಗೀರುಗಂಧ ಅಕ್ಷತೆಯ ಧರಿಸಿದಂತೆ – ನೀ ಮೆರೆಸಿದಂತೆಗಾರುಡಿಯ ಮತ ಬಿಟ್ಟು ನಾದಬ್ರಹ್ಮನ ಪಿಡಿದುಸಾರಿ ಸೇರಿ ಮುಕ್ತಿಯನ್ನು ಶಮನದಿಂದ – ಮತ್ತೆ ಸುಮನದಿಂದನಾರಾಯಣ ಅಚ್ಯುತಾನಂತಾದಿಕೇಶವನಸಾರಾಮೃತವನುಂಡು ಸುಖಿಸೊ ಲಂಡ ಜೀವವೆ – ಎಲೊ ಭಂಡ ಜೀವವೆ||5||