ನಾನು ನಿನಗೊಲಿದೆ, ನೀನು ಎನಗೊಲಿದೆ.

ನಾನು ನಿನಗೊಲಿದೆ, ನೀನು ಎನಗೊಲಿದೆ.
ನೀನೆನ್ನನಗಲದಿಪ್ಪೆ, ನಾನಿನ್ನನಗಲದಿಪ್ಪೆನಯ್ಯಾ.
ನಿನಗೆ ಎನಗೆ ಬೇರೊಂದು ಠಾವುಂಟೆ ?
ನೀನು ಕರುಣಿಯೆಂಬುದ ಬಲ್ಲೆನು ;
ನೀನಿರಿಸಿದ ಗತಿಯೊಳಗಿಪ್ಪವಳಾನು. ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *